Breaking
20 Jun 2026, Sat

ಲೂಡೋ ಕಾಯಿನ್‌ ನುಂಗಿ ಎಂಟು ವರ್ಷದ ಬಾಲಕಿ ಸಾವು

ಉಳ್ಳಾಲ: ತೊಕ್ಕೊಟ್ಟು ಸಮೀಪದ ಕೊಲ್ಯ ಎಂಬಲ್ಲಿ ಎಂಟು ವರ್ಷದ ಹೆಣ್ಣು ಮಗುವೊಂದು ಲೂಡೋ ಆಟದ ಕಾಯಿನ್ ಅನ್ನು ನುಂಗಿ ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ನಡೆದಿದೆ. 

ಮೃತಪಟ್ಟ ಬಾಲಕಿಯನ್ನು ಕಾಸರಗೋಡು ಜಿಲ್ಲೆಯ ಮಧೂರು ಉಳಿಯತಡ್ಕ ನಿವಾಸಿ ರಾಜೇಶ್ ಗಟ್ಟಿ ಮತ್ತು ರಾಜೇಶ್ವರಿ ದಂಪತಿಯ ಎರಡನೇ ಪುತ್ರಿ ತನುಷ್ಕಾ (8) ಎಂದು ಗುರುತಿಸಲಾಗಿದೆ.

ಫೆ. 21 ರಂದು ಶಾಲೆಗೆ ರಜೆ ಇದ್ದ ಕಾರಣ ತನುಷ್ಕಾ ತನ್ನ ಅಣ್ಣ ಮತ್ತು ತಂಗಿಯ ಜತೆ ಲೂಡೋ ಆಟ ಆಡುತ್ತಿದ್ದರು. ಈ ವೇಳೆ ತನುಷ್ಕಾ ಲೂಡೊ ಆಟದ ಪ್ಲಾಸ್ಟಿಕ್ ಕಾಯಿನ್ ಅನ್ನು ನುಂಗಿ ಏಕಾಏಕಿ ಉಸಿರುಗಟ್ಟಿದಳು. ಇದರಿಂದ ಗಾಬರಿಗೊಂಡ ತಾಯಿ ನೆರೆಹೊರೆಯವರ ಸಹಾಯದಿಂದ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.  ಹೆಚ್ಚಿನ ಚಿಕಿತ್ಸೆಗಾಗಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಾಗಲೇ ಬಾಲಕಿ ಮೃತಪಟ್ಟಿದ್ದಾರೆ ಎಂದು ಎನ್ನಲಾಗಿದೆ.

ತನುಷ್ಕಾ ತೊಕ್ಕೊಟ್ಟುವಿನ ಖಾಸಗಿ ಶಾಲೆಯಲ್ಲಿ ಎರಡನೇ ತರಗತಿಯಲ್ಲಿ ಓದುತ್ತಿದ್ದು, ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *