Breaking
23 Feb 2026, Mon

ಕಿನ್ನಿಗೋಳಿಯಲ್ಲಿ ಬೋನಿಗೆ ಬಿದ್ದ ಚಿರತೆ

ಕಿನ್ನಿಗೋಳಿ: ಚಿರತೆಯೊಂದು ಅರಣ್ಯ ಇಲಾಖೆಯವರು ಇಟ್ಟಿದ್ದ ಬೋನಿಗೆ ಬಿದ್ದ ಘಟನೆ ಫೆ.21 ರಂದು ನಡೆಸಿದೆ.

ಕಳೆದ ದಿನಗಳಿಂದ ದಾಮಸ್ ಕಟ್ಟೆಯ ಕೋಲೈಟ್ಟು ವನ್ಯ ಶಿಖರ ಲೇಔಟ್‌ ಪ್ರದೇಶದಲ್ಲಿ ಚಿರತೆ  ಸಂಚರಿಸುತ್ತಿರುವ ಬಗ್ಗೆ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದರು.

ಈ ಕುರಿತು ಸ್ಥಳೀಯರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಮಾಹಿತಿ ಆಧರಿಸಿ   ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆಯ ಸಿಬ್ಬಂದಿಗಳು ಚಿರತೆಯನ್ನು ಸೆರೆ ಹಿಡಿಯಲು ಬೋನು ಇರಿಸಿದ್ದರು. ಅದರಂತೆಯೇ ಫೆ.21 ರಂದು ಚಿರತೆ ಬೋನಿಗೆ ಬಿದ್ದಿದೆ.

ಚಿರತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಬಳಿಕ ಸೂಕ್ತ ಅರಣ್ಯ ಪ್ರದೇಶಕ್ಕೆ ಬಿಡುಗಡೆ ಮಾಡಲಾಗುತ್ತದೆ ಎಂದು ಅರಣ್ಯ ಇಲಾಖಾಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *