ಕಲ್ಲಡ್ಕ: ಬಂಟ್ವಾಳ ತಾಲೂಕಿನ ಬೋಳಂತೂರು ಗ್ರಾಮದ ಸಂಕೋಡಿ ಎಂಬಲ್ಲಿ ನೂತನವಾಗಿ ನಿರ್ಮಿಸಲಾದ ಶ್ರೀ ನಾಗಬ್ರಹ್ಮ ರಕ್ತೇಶ್ವರಿ ಸಾನ್ನಿಧ್ಯದ ಪುನರ್‌ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ ಹಾಗೂ ಯಕ್ಷಗಾನ ಬಯಲಾಟ ಕಾರ್ಯಕ್ರಮವು ಫೆ. 25ರಂದು ನಡೆಯಲಿದೆ.

ಬೆಳಿಗ್ಗೆ 8 ಗಂಟೆಗೆ ಗಣಪತಿ ಹೋಮ, ಬಳಿಕ ಭಜನಾ ಸಂಕೀರ್ತನೆ ನಡೆಯಲಿದ್ದು, ಬೆಳಿಗ್ಗೆ 9:43ರ ಶುಭ ಮುಹೂರ್ತದಲ್ಲಿ ನಾಗದೇವರ ಪ್ರತಿಷ್ಠೆ ಹಾಗೂ ಬ್ರಹ್ಮಕಲಶಾಭಿಷೇಕ ನೆರವೇರಲಿದೆ. ನಂತರ ನಾಗತಂಬಿಲ ನಡೆಯಲಿದೆ. ಮಧ್ಯಾಹ್ನ 12 ಗಂಟೆಯಿಂದ ಧಾರ್ಮಿಕ ಸಭಾ ಕಾರ್ಯಕ್ರಮ ಜರುಗಲಿದೆ.

ಸಂಜೆ 6 ಗಂಟೆಯಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ “ಶ್ರೀದೇವಿ ಮಹಾತ್ಮೆ” ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ.








