Breaking
21 Jun 2026, Sun

ಖಾರದ ಪುಡಿ ಎರಚಿ ಹಲ್ಲೆ ಮಾಡಿ ಚಿನ್ನದ ಸರ ಎಗರಿಸಿದ ಆರೋಪಿಯ ಬಂಧನ

ಉಡುಪಿ: ಖಾರದ ಪುಡಿ ಎರಚಿ ಹಲ್ಲೆ ಮಾಡಿ ಚಿನ್ನದ ಸರ ಎಗರಿಸಿದ ಓರ್ವ ಕಳ್ಳನನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಮುತ್ತಣ್ಣ (20 ವ) ಎಂದು ಗುರುತಿಸಲಾಗಿದೆ

ಫೆ. 20 ರಂದು ಶೌಚಾಲಯಕ್ಕೆ ತೆರಳಿ ವಾಪಸ್ಸು ಬರುತ್ತಿದ್ದ ವೇಳೆ, ಅಪರಿಚಿತ ವ್ಯಕ್ತಿಯೊಬ್ಬರು ಮೀನಿನ ವಿಚಾರ ಕೇಳುವ ನೆಪದಲ್ಲಿ ಮಾತು ಆರಂಭಿಸಿ, ಆತನ ಮುಖಕ್ಕೆ ಖಾರದ ಪುಡಿ ಎರಚಿದ್ದಾರೆ. ಬಳಿಕ ಇನ್ನಿಬ್ಬರು ಆರೋಪಿಗಳು ಸೇರಿಕೊಂಡು ಚಾಕು ತೋರಿಸಿ ಬೆದರಿಸಿ, ಕುತ್ತಿಗೆಯಲ್ಲಿದ್ದ ಸುಮಾರು 6 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರವನ್ನು ಸುಲಿಗೆ ಮಾಡಿಕೊಂಡು ಪರಾರಿಯಾಗಿದ್ದರು.

ಈ ಕುರಿತು ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಅದೇ ದಿನ ರಾತ್ರಿ 8 ಗಂಟೆಗೆ ಬಂಧಿಸಿದ್ದಾರೆ.

ಬಂಧಿತನಿಂದ 37.570 ಗ್ರಾಂ ತೂಕದ ಚಿನ್ನದ ಸರವನ್ನು ವಶ ಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.

Leave a Reply

Your email address will not be published. Required fields are marked *