Breaking
23 Feb 2026, Mon

ವಿದ್ಯುತ್‌ ಸ್ಪರ್ಶಿಸಿ ಯುವಕ ಸಾವು

ಉಳ್ಳಾಲ: ವಿದ್ಯುತ್‌ ಸ್ಪರ್ಶಿಸಿ ಯುವಕನೋರ್ವ ಮೃತಪಟ್ಟಿರುವ ಘಟನೆ ತೊಕ್ಕೊಟ್ಟುವಿನಲ್ಲಿ ನಡೆದಿದೆ.

ಮೃತಪಟ್ಟ ಯುವಕನನ್ನು ಪಜೀರು ಬೆಂಗೋಡಿ ಪದವು ನಿವಾಸಿಯಾಗಿದ್ದು ಸದ್ಯ ಮಂಗಳೂರು ಪಾಂಡೇಶ್ವರದಲ್ಲಿ ವಾಸವಾಗಿರುವ ಸಲ್ಮಾನ್ ಫಾರಿಶ್ (20) ಎಂದು ಗುರುತಿಸಲಾಗಿದೆ.

ತೊಕ್ಕೊಟ್ಟಿನ ವಾಣಿಜ್ಯ ಮಳಿಗೆಯೊಂದರಲ್ಲಿ ನೂತನ ವಸ್ತ್ರ ಮಳಿಗೆ ಶುಭಾರಂಭಗೊಳ್ಳುವ ಹಿನ್ನೆಲೆಯಲ್ಲಿ ಒಳಾಂಗಣದಲ್ಲಿ ವಿದ್ಯುತ್ ಕೆಲಸ ನಡೆಯುತ್ತಿತ್ತು. ಈ ವೇಳೆ ವಿದ್ಯುತ್ ಸ್ಪರ್ಶಿಸಿ ಸಲ್ಮಾನ್ ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಟೋ ರಿಕ್ಷಾದ ಮೂಲಕ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ದಾರಿ ಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *