Breaking
5 Aug 2026, Wed

ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿಮಧ್ಯೆಯೇ ಆಂಬುಲೆನ್ಸ್‌ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ

ಬೆಳ್ತಂಗಡಿ : ಗರ್ಭಿಣಿಯೊಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ದಾರಿಮಧ್ಯೆ ಆಂಬುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ಇಂದು ( ಫೆ.23) ನಡೆದಿದೆ.

ಸುದೆಮುಗೇರು ನಿವಾಸಿ ಲೀಲಾವತಿ ಆಂಬುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆಯಾಗಿದ್ದಾರೆ.

ಇಂದು ಬೆಳಗ್ಗಿನ ಜಾವ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಹೆರಿಗೆಗಾಗಿ ಲೀಲಾವತಿ ಅವರನ್ನು ದಾಖಲಿಸಲಾಗಿತ್ತು. ವೈದ್ಯರು ಲೀಲಾವತಿಯನ್ನು ಪರಿಶೀಲಿಸಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ಕರೆದೊಯ್ಯಲು ತಿಳಿಸಿದರು. ಅದರಂತೆ ಲೀಲಾವತಿಯನ್ನು ಆಂಬುಲೆನ್ಸ್ ಮೂಲಕ ಕರೆದೊಯ್ಯುವ ವೇಳೆ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಸಮೀಪಿಸುತ್ತಿದ್ದಂತೆ ಲೀಲಾವತಿa ಅವರಿಗೆ ವಿಪರೀತ ಹೆರಿಗೆ ನೋವು ಕಾಣಿಸಿಕೊಂಡಿದ್ದು ತಕ್ಷಣವೇ ಕಾರ್ಯಪ್ರವರ್ತರಾದ ಶುಶ್ರೂಶಕಿಯರಾದ ಸಿಸ್ಟರ್ ಕುಮುದಾ ಹಾಗೂ ಸಿಸ್ಟರ್ ಸೌಮ್ಯಾ ಎಸ್. ಆಂಬುಲೆನ್ಸ್ ವಾಹನದಲ್ಲೇ ಲೀಲಾವತಿಗೆ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ತಾಯಿ ಹಾಗೂ ಗಂಡು ಮಗು ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *