Breaking
21 Sep 2026, Mon

ಕಟಪಾಡಿಯಲ್ಲಿ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

ಉಡುಪಿ: ಯುವತಿಯೊಬ್ಬರು ನಾಪತ್ತೆಯಾಗಿರುವ ಘಟನೆ ಕಟಪಾಡಿಯಲ್ಲಿ ನಡೆದಿದೆ.

ನಾಪತ್ತೆಯಾದ ವಿದ್ಯಾರ್ಥಿನಿಯನ್ನು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮೂಲದ ದೀಪಾ ಸುರೇಶ್ ಲಮಾಣಿ (20) ಎಂದು ಗುರುತಿಸಲಾಗಿದೆ. ಅವರು ಕಟಪಾಡಿಯ ಆನೆಗುಡ್ಡೆ ಪ್ರದೇಶದಲ್ಲಿರುವ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು ಎಂದು ತಿಳಿದುಬಂದಿದೆ.

ಯುವತಿ ಉಡುಪಿ ನಗರದ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದು, ಫೆ. 20 ರಂದು ಕಾಲೇಜಿಗೆ ರಜೆ ಹಾಕಿ ಮನೆಯಿಂದ ಹೊರಗೆ ಹೋಗಿದ್ದರು. ಅದಾದ ಬಳಿಕ ಅವರು ಮನೆಗೆ ವಾಪಸ್ಸಾಗದೇ ನಾಪತ್ತೆಯಾಗಿದ್ದಾರೆ.

ದೀಪಾ ಅವರು ಸುಮಾರು 5 ಅಡಿ 6 ಇಂಚು ಎತ್ತರವಾಗಿದ್ದು, ಗೋಧಿ ವರ್ಣ, ಸಾಧಾರಣ ಮೈಕಟ್ಟು ಹೊಂದಿದ್ದಾರೆ. ಕನ್ನಡ, ಲಂಬಾಣಿ ಹಾಗೂ ಹಿಂದಿ ಭಾಷೆಗಳನ್ನು ಮಾತನಾಡುತ್ತಾರೆ.

ಈ ಯುವತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಿದ್ದಲ್ಲಿ ಸಾರ್ವಜನಿಕರು ಕೂಡಲೇ ಕಾಪು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ.

Leave a Reply

Your email address will not be published. Required fields are marked *