Breaking
21 Sep 2026, Mon

ಅಕ್ರಮ ಜಾನುವಾರು ಸಾಗಾಟ : ಮೂವರು ಆರೋಪಿಗಳ ಬಂಧನ

ಮಂಗಳೂರು: ಲಾರಿಯಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ಮೂಲದ ದಸ್ತಗೀರ್ ಸಾಬ್, ಖತಿಪ್ ಪಾಷಾ ಮತ್ತು ಅಯೂಬ್ ಖಾನ್ ಎಂದು ಗುರುತಿಸಲಾಗಿದೆ.

ಲಾರಿಯಲ್ಲಿ ಶಿವಮೊಗ್ಗದಿಂದ ಮಂಗಳೂರು ಮಾರ್ಗವಾಗಿ ಕೇರಳದ ಹೊಸಂಗಡಿಗೆ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಪಡೆದ ಪೊಲೀಸರು ಫೆ. 22 ರಂದು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಲಾರಿಯನ್ನು ತಡೆದು ತಪಾಸಣೆ ನಡೆಸಿದರು. ಈ ವೇಳೆ ಅಕ್ರಮ ಸಾಗಾಟ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.

ಜಾನುವಾರುಗಳನ್ನು ಹೊಸಂಗಡಿಯಲ್ಲಿ ಕಸಾಯಿಖಾನೆಗೆ ಸಾಗಿಸಿ, ಬಳಿಕ ವಧಿಸಿ ಮಾಂಸ ಮಾರಾಟ ಮಾಡುವ ಉದ್ದೇಶ ಹೊಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *