Breaking
21 Sep 2026, Mon

ಸನ್ಯಾಸಿ ವೇಷದಲ್ಲಿ ನಕಲಿ ಹುಲಿ ಉಗುರು ಮಾರಾಟ ಮಾಡಲು ಯತ್ನಿಸಿದ ಆರೋಪಿಯ ಬಂಧನ

ಉಡುಪಿ: ಸನ್ಯಾಸಿ ವೇಷ ಧರಿಸಿ ಅಸಲಿ ಹುಲಿ ಉಗುರು ಎಂದು ನಂಬಿಸಿ ನಕಲಿ ಉಂಗುರನ್ನು ಮಾರಟ ಮಾಡಲು ಯತ್ನಿಸಿದ್ದ ಆರೋಪಿಯನ್ನು ಉಡುಪಿ ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ.

ಆರೋಪಿಯು ತನ್ನ ಬಳಿ ಇರುವ ಹುಲಿ ಉಗುರು ಅಸಲಿಯದು ಎಂದು ಜನರನ್ನು ನಂಬಿಸಲು ಪ್ರಯತ್ನಿಸಿದ್ದನು. ಈತನ ನಡವಳಿಕೆಯಿಂದ ಅನುಮಾನಗೊಂಡ ಸಾರ್ವಜನಿಕರು ಸಂಬಂಧಿತ ಕಾರ್ಯಕರ್ತರಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ತಿಳಿಯುತ್ತಿದ್ದಂತೆಯೇ ಸಮಾಜಸೇವಕರಾದ ನಿತ್ಯಾನಂದ ಒಳಕಾಡು ಹಾಗೂ ತಾರಾನಾಥ್ ಮೇಸ್ತ ಶಿರೂರು ಅವರು ಕಾರ್ಯಾಚರಣೆ ನಡೆಸಿದರು. ಈ ವೇಳೆ ಆರೋಪಿಯು ಸ್ಥಳದಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ, ಉಡುಪಿ ನಗರ ಠಾಣೆಯ ಪೊಲೀಸರು ಹಳೆ ಬಸ್ ನಿಲ್ದಾಣದ ಬಳಿ ಆತನನ್ನು ವಶಕ್ಕೆ ಪಡೆದಿದ್ದಾರೆ.

Leave a Reply

Your email address will not be published. Required fields are marked *