ಉಡುಪಿ: ನಿಯಂತ್ರಣ ತಪ್ಪಿದ ಖಾಸಗಿ ಕಾಲೇಜು ಬಸ್ ವೊಂದು ಉರುಳಿಬಿದ್ದ ಘಟನೆ ಹಳ್ಳಿಹೊಳೆ ಗ್ರಾಮದ ಶೆಟ್ಟಿಪಾಲು ಬಳಿ ನಡೆದಿದೆ.

ಹಳ್ಳಿಹೊಳೆ ಗ್ರಾಮದ ಸುಳಗೋಡು ಶಾಲೆಯಲ್ಲಿ ನಡೆಯುತ್ತಿರುವ ಎನ್‌ಎಸ್‌ಎಸ್ ಶಿಬಿರಕ್ಕೆ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳಿಂದ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯಲ್ಲಿ ಬಸ್ ನ ಮುಂಭಾಗ ನಜ್ಜುಗುಜ್ಜಾಗಿದೆ.







