ಬಂಟ್ವಾಳ: ಪಿಕಪ್ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ಬ್ರಹ್ಮರಕೊಟ್ಲು ಎಂಬಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ನರಿಕೊಂಬು ಮರ್ದೊಳಿ ನಿವಾಸಿ, ಸಂತೋಷ್ ಎಂದು ಗುರುತಿಸಲಾಗಿದೆ.

ಸಂತೋಷ್ ಅವರು ಬೆಳಿಗ್ಗೆ ಮನೆಯಿಂದ ಮಂಗಳೂರಿಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಬ್ರಹ್ಮರಕೋಟ್ಲಿನಲ್ಲಿ ಟಯರ್ ಬ್ಲಾಸ್ಟ್ ಆಗಿ ರಸ್ತೆ ಬದಿ ನಿಂತಿದ್ದ ಪಿಕಪ್ ವಾಹನಕ್ಕೆ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








