Breaking
21 Sep 2026, Mon

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ : ಪ್ರಯಾಣಿಕರು ಅಪಾಯದಿಂದ ಪಾರು

ಸುಳ್ಯ: ಬೆಳ್ಳಾರೆ ರಸ್ತೆಯ ಬೆಂಗಮಲೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಕಾರು ಸಂಪೂರ್ಣವಾಗಿ ಹಾನಿಗೊಳಗಾದ ಘಟನೆ ಫೆ. 23 ರಂದು ನಡೆದಿದೆ.

ಸುಳ್ಯದ ಬ್ಯಾಂಕ್ ಮ್ಯಾನೇಜರ್ ಉತ್ಸವ್ ಚಕ್ರವರ್ತಿ ಮತ್ತು ಇನ್ನೊಬ್ಬ ವ್ಯಕ್ತಿ ಸಾಲ ವಸೂಲಾತಿ ಕೆಲಸಕ್ಕಾಗಿ ಪಂಜ ಕಡೆಗೆ ಪ್ರಯಾಣಿಸುತ್ತಿದ್ದರು. ಬಳಿಕ ಬೆಳ್ಳಾರೆಯಿಂದ ಸುಳ್ಯಕ್ಕೆ ಹಿಂತಿರುಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *