Breaking
24 Feb 2026, Tue

ಅಂಗನವಾಡಿ ಸಹಾಯಕಿ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಅಂಗನವಾಡಿ ಸಹಾಯಕಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಫೆ. 23ರಂದು ಚಾರ್ಮಾಡಿ ಗ್ರಾಪಂ ವ್ಯಾಪ್ತಿಯ ಚಿಬಿದ್ರೆ ಬಳಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಮುಕ್ಕುಡದ ನಿವಾಸಿ ಲೀಲಾ(55) ಎಂದು ಗುರುತಿಸಲಾಗಿದೆ.

ಮನೆಯ ಸಮೀಪದ ಅಂಗನವಾಡಿಯಲ್ಲಿ ಸಹಾಯಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ಫೆ. 23 ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಮೃತರು ಪತಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *