Breaking
21 Jun 2026, Sun

ಟೈರ್ ಸ್ಫೋಟಗೊಂಡು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಕಾರ್ಕಳ: ಇಕೋ ಕಾರಿನ ಟೈರ್ ಸ್ಫೋಟಗೊಂಡು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಫೆ. 23ರಂದು ನಡೆದಿದೆ.

ಕಾರ್ಕಳದಿಂದ ಜೋಡುರಸ್ತೆ ಕಡೆಗೆ ಸಂಚರಿಸುತ್ತಿದ್ದ ವೇಳೆ ಕಾರಿನ ಟೈರ್ ಸ್ಪೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ವಿಭಾಜಕದ ಮೇಲೇರಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ವಿದ್ಯುತ್ ಕಂಬವು ನೆಲಕ್ಕುರುಳಿದ್ದು ಕಾರಿನ ಮುಂಭಾಗವು ಸಂಪೂರ್ಣ ನಜ್ಜುಗುಜ್ಜಾಗಿದೆ.

ಘಟನೆಯಲ್ಲಿಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *