Breaking
25 Feb 2026, Wed

ಬೈಕ್‌ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಮಣಿಪಾಲ: ಬೈಕ್‌ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಬಡಗಬೆಟ್ಟು ಗ್ರಾಮದ ನೇತಾಜಿನಗರ ನಿವಾಸಿಗಳಾದ ಶರತ್‌ (26) ಹಾಗೂ ಗಣೇಶ್‌ (31) ಎಂದು ಗುರುತಿಸಲಾಗಿದೆ.

ಫೆ.21 ರಂದು ಸುದರ್ಶನ್ ಅವರು ಬಡಗಬೆಟ್ಟು ಗ್ರಾಮದ ರಾಹುಲ್ ನಗರದಲ್ಲಿರುವ ವೀರ ಮಾರುತಿ ಭಜನಾ ಮಂದಿರದ ಬಳಿ ತಮ್ಮ ಬೈಕ್‌ನ್ನು ನಿಲ್ಲಿಸಿದ್ದರು. ಬಳಿಕ ಬೈಕ್‌ ಕಳುವಾಗಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.

ಪ್ರಕರಣದ ತನಿಖೆ ಕೈಗೊಂಡ ಪೊಲೀಸರು 11 ಗಂಟೆಗಳೊಳಗೆ ಆರೋಪಿಗಳನ್ನು ಬಂಧಿಸಿ, ಕಳುವಾದ ಬೈಕ್‌ನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿಗಳ ವಿರುದ್ಧ 11 ಕ್ಕೂ ಅಧಿಕ ಕಳವು ಪ್ರಕರಣಗಳು ದಾಖಲಾಗಿವೆ.

Leave a Reply

Your email address will not be published. Required fields are marked *