ಕಡಬ : ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಓಮ್ನಿ ಕಾರೊಂದು ಡಿಕ್ಕಿ ಹೊಡೆದು ಗಾಯಗೊಂಡಿರುವ ಘಟನೆ ಗೋಳಿತ್ತಡಿಯಲ್ಲಿ ನಡೆದಿದೆ.
ಗಾಯಗೊಂಡವರನ್ನು ಹಳೆನೇರಂಕಿ ಗ್ರಾಮದ ಶಿವಪ್ಪ ಬಂಗೇರ ಎಂದು ತಿಳಿದುಬಂದಿದೆ.

ಶಿವಪ್ಪ ರವರು ಗೋಳಿತ್ತಡಿಗೆ ಹೋಗಿ ರಾಮ ಕುಂಜ ಕಡೆಗೆ ವಾಪಸಾಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ಅಪಘಾತದಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣವೇ ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.

ಈ ಕುರಿತು ಪೊಲೀಸ್ ಠಾಣೆಯಲ್ಲಿ ಒಮ್ಮಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.






