ಬೆಳ್ತಂಗಡಿ: ಸಾಮಾನ್ಯ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಿಂದುಳಿದ ವರ್ಗ ಮಹಿಳಾ ಮೀಸಲು ಸ್ಥಾನ ಸ್ಥಾನಕ್ಕೆ ಮೀಸಲಾಗಿದ್ದ ಸ್ಥಾನದಿಂದ ನೆರಿಯ ಹಾಲು ಉತ್ಪಾದಕರ ಸಹಕಾರಿ ಸಂಘ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷ ಅವಧಿಯ ನಿರ್ದೇಶಕರ ಸ್ಥಾನದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆ ನಡೆಯಿತು.

ತಾರನಾಥ ಎಂ ಬಾಲಕೃಷ್ಣ ಗೌಡ ವಿಮಲಾ ಲೀಲಾದರ ಎ ಎಸ್, ಶೋಭಾ ಪಿ ಎಸ್ ಮನೋರಾಮಾ ಹಾಗೂ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಸರಸ್ವತಿ ಎ, ಸಜಿತ, ಲೋಕೇಶ್ ಎ ಸಿ, ನಾಗೇಶ್, ಲೋಕೇಶ್ ಕೆ, ಸಂಧ್ಯಾ, ಸುಂದರ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತೀಯ ಬೆಂಬಲಿತ ಅಭ್ಯರ್ಥಿಗಳಾದ ಸರಸ್ವತಿ ಎ. ಅವರು ಅಧ್ಯಕ್ಷರಾಗಿ, ಸಜಿತಾ ಅವರು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಚುನಾವಣೆಯ ರಿಟರ್ನಿಂಗ್ ಅಧಿಕಾರಿಯಾಗಿ ಪ್ರತಿಮ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಬಿ.ಎಂ. ಶರೀಫ್ ಹಾಗೂ ಸಿಬ್ಬಂದಿಗಳು ಸಹಕರಿಸಿದರು.

ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿಯ ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಯಶವಂತ ಗೌಡ ಪುದುವೆಟ್ಟು, ನೆರಿಯ ಶಕ್ತಿ ಕೇಂದ್ರದ ಅಧ್ಯಕ್ಷರಾದ ವಿಶ್ವನಾಥ್ ಗೌಡ, ಮಾಜಿ ಗ್ರಾಮ ಪಂಚಾಯತ್ ಸದಸ್ಯ ಬಾಬು ಗೌಡ,ಸಚಿನ್ ಕೆ ಎಸ್, ಪ್ರಮುಖರಾದ ರಾಮಕೃಷ್ಣ ಗೌಡ, ಸಂಜೀವ ಗೌಡ ಹಾಗೂ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.








