Breaking
23 Dec 2024, Mon

ಇತಿಹಾಸ ಪ್ರಸಿದ್ಧ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ ಹೊಕ್ಕಾಡಿಗೋಳಿ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

ಹೊಕ್ಕಾಡಿಗೋಳಿ: ಮಹಿಷಮರ್ದಿನಿ ಕಂಬಳ ಸಮಿತಿ ಇದ್ರ ನೇತೃತ್ವದಲ್ಲಿ ಡಿಸೆಂಬರ್ 7 ಶನಿವಾರದಂದು ನಡೆಯಲಿರುವ ಇತಿಹಾಸ ಪ್ರಸಿದ್ಧ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ ಹೊಕ್ಕಾಡಿಗೋಳಿ ಇದರ ಆಮಂತ್ರಣ ಪತ್ರಿಕೆಯು ಇಂದು ಶ್ರೀ ಕ್ಷೇತ್ರ ಪೂಂಜ ದೇವಸ್ಥಾನದ ಅಸ್ರಣ್ಣರಾದ ಕೃಷ್ಣ ಪ್ರಸಾದ್ ಆಚಾರ್ಯ ಇವರು ಹೊಕ್ಕಾಡಿಗೋಳಿ ಕಂಬಳದ ವಠಾರದಲ್ಲಿ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಕಂಬಳ ಸಮಿತಿಯ ಅಧ್ಯಕ್ಷರಾದ ರಶ್ಮಿತ್ ಶೆಟ್ಟಿ ಕೈತ್ರೋಡಿ, ಪೂಂಜ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ರತ್ನ ಕುಮಾರ್ ಚೌಟ, ಕುಕ್ಕಿಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೇಖರ್ ಶೆಟ್ಟಿ ಬದ್ಯಾರ್, ಸದಸ್ಯರಾದ ಯೋಗೀಶ್ ಆಚಾರ್ಯ, ಕಂಬಳ ಸಮಿತಿಯ ಅಧ್ಯಕ್ಷರಾದ ರಶ್ಮಿತ್ ಶೆಟ್ಟಿ ಕೈತ್ರೋಡಿ, ಗೌರವ ಸಲಹೆಗಾರಾರಾದ ಜಗತ್ಪಾಲ್ ಶೆಟ್ಟಿ ಉಮಾನೊಟ್ಟು, ಕುಟ್ಟಿ ಶೆಟ್ಟಿ ಹಕ್ಕೇರಿ, ಗೌರವಾಧ್ಯಕ್ಷರಾದ ಸಂಜೀವ ಶೆಟ್ಟಿ ಗುಂಡ್ಯಾರ್ ಪ್ರಧಾನ ಕಾರ್ಯದರ್ಶಿಯಾದ ಪ್ರಭಾಕರ್ ಹುಲಿಮೇರು ಹಾಗೂ ಎಲ್ಲಾ ಪದಾಧಿಕಾರಿಗಳು, ಸ್ಥಳ ದಾನಿಗಳು, ಸಹಕರಿಸುವ ಎಲ್ಲಾ ಸಂಘ ಸಂಸ್ಥೆಯ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು.

Leave a Reply

Your email address will not be published. Required fields are marked *