Breaking
25 Feb 2026, Wed

ಶಾಸಕರ ಕಾರ್ಮಿಕ ಪರ ಬದ್ಧತೆ : ಬಿಎಮ್‌ಎಸ್ ಸ್ವಾಗತ ಅನಿಲ್ ಕುಮಾರ್ ಯು

ಬೆಳ್ತಂಗಡಿ: ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳ ಕುರಿತು ಫೆ.24 ರಂದು ಬೆಳ್ತಂಗಡಿ ಪ್ರವಾಸಿ ಮಂದಿರದಲ್ಲಿ ನಡೆದ ಕುಂದುಕೊರತೆ ಸಭೆಯಲ್ಲಿ, ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ ಅವರು ಕಾರ್ಮಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದನೆ ನೀಡಿದ್ದು ಗಮನಾರ್ಹವಾಗಿದೆ.

ಸಭೆಯಲ್ಲಿ ಕೆಲವೊಂದು ಕಾರ್ಮಿಕರ ಸಮಸ್ಯೆಗಳು ಸ್ಥಳದಲ್ಲಿಯೇ ಬಗೆಹರಿಸಲ್ಪಟ್ಟಿದ್ದು, ಬಾಕಿ ಇರುವ ಪ್ರಕರಣಗಳ ಕುರಿತು ಮೇಲಾಧಿಕಾರಿಗಳ ಮಟ್ಟದಲ್ಲಿ ವಿಶೇಷ ಸಭೆ ನಡೆಸಿ, ಬಿಎಮ್‌ಎಸ್ ಪ್ರಮುಖರನ್ನು ಸೇರಿಸಿಕೊಂಡು ಅವರ ಸಮ್ಮುಖದಲ್ಲೇ ಸಮಗ್ರ ಪರಿಹಾರ ಒದಗಿಸುವುದಾಗಿ ಶಾಸಕರು ಭರವಸೆ ನೀಡಿದರು.

ಇದಕ್ಕಾಗಿ ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಸ್ವತಃ ಮಾಡುವುದಾಗಿ ಅವರು ತಿಳಿಸಿರುವುದು ಕಾರ್ಮಿಕರಲ್ಲಿ ಹೊಸ ವಿಶ್ವಾಸವನ್ನು ಮೂಡಿಸಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಬಿಎಮ್‌ಎಸ್ ಜಿಲ್ಲಾ ಅಧ್ಯಕ್ಷ ಅನಿಲ್ ಕುಮಾರ್ ಯು ಅವರು, ನಮ್ಮ ಶಾಸಕರು ಕಾರ್ಮಿಕರ ಪರ ತಮ್ಮ ಬದ್ಧತೆಯನ್ನು ಸ್ಪಷ್ಟವಾಗಿ ತೋರಿಸಿದ್ದಾರೆ. ಬಿಎಮ್‌ಎಸ್ ಸದಾ ಶಾಸಕರೊಂದಿಗೆ ಕೈಜೋಡಿಸಿ ಕಾರ್ಮಿಕರ ಹಿತಾಸಕ್ತಿಗೆ ಕೆಲಸ ಮಾಡುತ್ತದೆ. ನಮ್ಮ ಶಾಸಕರೂ ಕಾರ್ಮಿಕರ ಪರ ಸದಾ ನಿಲ್ಲಬೇಕು ಎಂಬುದು ನಮ್ಮ ಮನದಾಳದ ನಿರೀಕ್ಷೆ ಎಂದು ತಿಳಿಸಿದ್ದಾರೆ.

ಸಭೆಯ ಈ ಬೆಳವಣಿಗೆ ಬೆಳ್ತಂಗಡಿ ತಾಲೂಕಿನ ಕಾರ್ಮಿಕರಿಗೆ ಆಶಾಭಾವನೆಯ ಸಂದೇಶ ನೀಡಿದೆ.

Leave a Reply

Your email address will not be published. Required fields are marked *