Breaking
27 Apr 2026, Mon

ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಸುಮಾರು ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಗಳೂರು: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಸುಮಾರು ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಠಾಣಾ ಪೊಲೀಸರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬಂಟ್ವಾಳ, ಕನ್ಯಾನ ನಿವಾಸಿ ಇಬ್ರಾಹಿಂ ಬಾತೀಸ್ ಎಂದು ಗುರುತಿಸಲಾಗಿದೆ.

ಫೆ. 24 ರಂದು ವಿದೇಶದಿಂದ ಮಂಗಳೂರಿಗೆ ಮರಳುತ್ತಿದ್ದ ವೇಳೆ ವಿಮಾನ ನಿಲ್ದಾಣದ ಇಮಿಗ್ರೇಶನ್ ವಿಭಾಗದ ಸಹಕಾರದಿಂದ ವಿಟ್ಲ ಪೊಲೀಸ್ ಠಾಣೆಯ ಹೆಡ್‌ಕಾನ್ಸ್‌ಟೇಬಲ್ ಹಾಗೂ ಪೊಲೀಸ್ ಕಾನ್ಸ್‌ಟೇಬಲ್ ಯಶಸ್ವಿಯಾಗಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮಾನ್ಯ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ಮಾರ್ಚ್ 7, 2026 ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *