ಬಂಟ್ವಾಳ : ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಬಂಟ್ವಾಳ ನಿವಾಸಿಗಳಾದ ಅಬ್ದುಲ್ ರಜಾಕ್ ಹಾಗೂ ಫೆಬಿಯಸ್ ಜೈಸನ್ ಪಿರೇರಾ (24) ಎಂದು ಗುರುತಿಸಲಾಗಿದೆ.

ಫೆ. 25 ರಂದು ಬಂಟ್ವಾಳ ತಾಲೂಕಿನ ಬಿ ಮೂಡ ಗ್ರಾಮದ ಪಲ್ಲಮಜಲು ಎಂಬಲ್ಲಿ ಇಬ್ಬರು ಆರೋಪಿಗಳು ಸಾರ್ವಜನಿಕ ಮೈದಾನದಲ್ಲಿ ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುವ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.







