Breaking
21 Jun 2026, Sun

ವಿದ್ಯಾರ್ಥಿಗಳಿಗೆ ಜಾತಿ ನಿಂದನೆಗೈದು ಹಲ್ಲೆ ನಡೆಸಿದ ತಂದೆ – ಮಗ ಬಂಧನ

ಮಂಗಳೂರು: ಬಾಬುಗುಡ್ಡೆಯ ರೈಲ್ವೇಟ್ರ್ಯಾಕ್ ಸಮೀಪದಲ್ಲಿ ಮಾತನಾಡುತ್ತಿದ್ದ ವಿದ್ಯಾರ್ಥಿಗಳಿಬ್ಬರಿಗೆ ಜಾತಿನಿಂದನೆಗೈದು ಹಲ್ಲೆ ನಡೆಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಸ್ಟೀವನ್ ಮೊಂತೇರೋ ಮತ್ತು ಆತನ ಪುತ್ರ ಅವಿಲ್ ಎಂದು ಗುರುತಿಸಲಾಗಿದೆ.

ಫೆ. 23 ರಂದು ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ಇಬ್ಬರು ವಿದ್ಯಾರ್ಥಿಗಳು ಬಾಬುಗುಡ್ಡೆಯ ರೈಲ್ವೆ ಟ್ರ್ಯಾಕ್ ಸಮೀಪ ಕುಳಿತು ಮಾತನಾಡುತ್ತಿದ್ದರು. ಈ ವೇಳೆ ದುಷ್ಕರ್ಮಿಗಳು ಅವರಿಗೆ ಜಾತಿ ನಿಂದನೆಗೈದು ಹಿಗ್ಗಾಮುಗ್ಗವಾಗಿ ಥಳಿಸಿರುವುದಲ್ಲದೆ, “ಕಿಸ್ ಮಾಡಿದ ವಿಡಿಯೋ ನಮ್ಮಲ್ಲಿದೆ; ಅದನ್ನು ಫೇಸ್‌ಬುಕ್‌ನಲ್ಲಿ ಹರಿಬಿಟ್ಟು ಮಾನಹಾನಿ ಮಾಡುತ್ತೇವೆ” ಎಂದು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಬಳಿಕ ಸಹಪಾಠಿಗಳಾದ ಅಪ್ರಾಪ್ತ ವಿದ್ಯಾರ್ಥಿಗಳ ಬಳಿಗೂ ಧಾವಿಸಿದ ದುಷ್ಕರ್ಮಿಗಳು ಹಲ್ಲೆ ನಡೆಸಿ ಕ್ಷಮೆ ಕೇಳುವಂತೆ ಒತ್ತಾಯಿಸಿರುವುದಾಗಿ ತಿಳಿದುಬಂದಿದೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಈ ಕುರಿತು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ ಪೊಲೀಸರು ಇದೀಗ ಇಬ್ಬರನ್ನು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *