Breaking
20 Jun 2026, Sat

ಬಿಜೈ ಖಾಸಗಿ ಶಾಲೆಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ಪರಿಶೀಲನೆ ಬಳಿಕ ಹುಸಿ ಎಂದು ದೃಢ

ಮಂಗಳೂರು: ನಗರದ ಬಿಜೈಯಲ್ಲಿರುವ ಖಾಸಗಿ ಶಾಲೆಯೊಂದಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ನಂತರ ಇದು ಹುಸಿ ಬೆದರಿಕೆ ಎಂದು ದೃಢಪಟ್ಟಿದೆ.

‘ಆರ್ನ ಅಶ್ವಿನ್ ಶೇಖರ್’ ಎಂಬ ಹೆಸರಿನಲ್ಲಿ ಬಂದ ಇ-ಮೇಲ್‌ನಲ್ಲಿ ಬೆಳಿಗ್ಗೆ 9.30 ಗಂಟೆಗೆ ಬಾಂಬ್ ಸ್ಫೋಟವಾಗುತ್ತದೆ ಎಂದು ಉಲ್ಲೇಖಿಸಲಾಗಿತ್ತು. ಇ-ಮೇಲ್ ತಮಿಳುನಾಡು ಮೂಲದ ಹೆಸರಿನಿಂದ ಕಳುಹಿಸಲ್ಪಟ್ಟಿರುವುದಾಗಿ ತಿಳಿದುಬಂದಿದೆ.

ಮಾಹಿತಿ ತಿಳಿಯುತ್ತಿದ್ದಂತೆಯೇ ಕದ್ರಿ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಧಾವಿಸಿ ಸಮಗ್ರ ಪರಿಶೀಲನೆ ನಡೆಸಿದರು. ಯಾವುದೇ ಸ್ಫೋಟಕ ವಸ್ತು ಪತ್ತೆಯಾಗದ ಹಿನ್ನೆಲೆಯಲ್ಲಿ ಇದು ಹುಸಿ ಬೆದರಿಕೆ ಎಂಬುದು ಸ್ಪಷ್ಟಗೊಂಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *