ಉಡುಪಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಖಾಸಗಿ ಅತಿಥಿ ಗೃಹ ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ಫೆ. 27 ರಂದು ನಡೆದಿದೆ.

ಅತಿಥಿ ಗೃಹದಲ್ಲಿ ಈ ಅವಘಡ ಸಂಭವಿಸಿದ್ದು ಘಟನೆಯ ವೇಳೆ ಬಾಡಿಗೆಗೆ ಪಡೆದಿದ್ದ ಅತಿಥಿಗಳು ಹೊರಗಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಮಲ್ಪೆ ಮತ್ತು ಉಡುಪಿಯಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಘಟನೆಯಲ್ಲಿ ಅತಿಥಿ ಗೃಹದ ಒಳಭಾಗ ಸಂಪೂರ್ಣವಾಗಿ ನಾಶವಾಗಿದೆ ಎಂದು ತಿಳಿದುಬಂದಿದೆ.






