ಬೆಳ್ತಂಗಡಿ: ಅಕ್ರಮವಾಗಿ ಗೋಹತ್ಯೆ ನಡೆಸಿ ಮಾಂಸ ಮಾಡುತ್ತಿದ್ದ ಮನೆಯನ್ನು ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿ ಜಪ್ತಿ ಮಾಡಿದ್ದಾರೆ.
ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಹೊಸವಕ್ಲು ಬಳಿ ಅಬ್ದುಲ್ ರಹಿಮಾನ್ ಅವರ ಮನೆ ಆವರಣದಲ್ಲಿ ಗೋಹತ್ಯೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದರು. ಈ ವೇಳೆ ಮನೆಯ ಆವರಣದಲ್ಲಿದ್ದ ಇಬ್ಬರು ವ್ಯಕ್ತಿಗಳು ಪರಾರಿಯಾಗಿದ್ದಾರೆ.

ಬಳಿಕ ಸ್ಥಳವನ್ನು ಪರಿಶೀಲಿಸಿದಾಗ ಗೋಮಾಂಸವನ್ನು ಪ್ಯಾಕೆಟ್ ಮಾಡಲಾಗಿದ್ದು, ಸಮೀಪದಲ್ಲಿದ್ದ ಆಟೋ ರಿಕ್ಷಾದಲ್ಲಿಯೂ ಗೋಮಾಂಸದ ಪ್ಯಾಕೆಟ್‌ಗಳು ಹಾಗೂ 56 ಕೆಜಿ ಗೋಮಾಂಸ ಪತ್ತೆಯಾಗಿದೆ.

ಘಟನಾ ಸ್ಥಳದಲ್ಲಿದ್ದ ಗೋಮಾಂಸ, ತೂಕದ ಯಂತ್ರ, ಆಟೋರಿಕ್ಷಾ, ಮೊಬೈಲ್ ಹಾಗೂ ಇತರೆ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸಲಾಗುತ್ತಿದೆ.







