Breaking
5 Aug 2026, Wed

ಮನೆಗೆ ಅಕ್ರಮವಾಗಿ ನುಗ್ಗಿ ಹಾನಿ : ಅಪ್ರಾಪ್ತ ಬಾಲಕಿಗೆ ಬೆದರಿಕೆ, ಪ್ರಕರಣ ದಾಖಲು

ಬೆಳ್ತಂಗಡಿ: ಅಕ್ರಮವಾಗಿ ಮನೆಗೆ ನುಗ್ಗಿ ಮನೆಯನ್ನು ಕೆಡವಿ ಹಾಗೂ ಘಟನೆಯ ವಿಡಿಯೋ ರೆಕಾರ್ಡ್ ಮಾಡಿದ ಅಪ್ರಾಪ್ತ ಬಾಲಕಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಕಕ್ಕರೆಬೆಟ್ಟು ನಿವಾಸಿ ರಾಜೀವಿ ಅವರಿಗೆ ಸೇರಿದ ಮನೆ ಇದಾಗಿದ್ದು, ಅವರು ಸರ್ಕಾರಿ ಭೂಮಿಯಲ್ಲಿ ಮನೆ ನಿರ್ಮಿಸಿಕೊಂಡು ವಾಸಿಸುತ್ತಿದ್ದರು.

ರಾಜೀವಿ ಮತ್ತು ಅವರ ಪತಿ ಕೆಲಸಕ್ಕೆ ತೆರಳಿದ್ದ ವೇಳೆ ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿದ ರಫೀಕ್ ಎಂಬಾತ ಮನೆಗೆ ಅಕ್ರಮವಾಗಿ ನುಗ್ಗಿ ಮನೆಯಲ್ಲಿದ್ದ ಟಿವಿ, ಫ್ರಿಜ್, ಗ್ಯಾಸ್ ಸಿಲಿಂಡರ್, ಪೀಠೋಪಕರಣಗಳು, ಬಟ್ಟೆ ಹಾಗೂ ದಿನಸಿ ವಸ್ತುಗಳನ್ನು ಹೊರತೆಗೆದು ಬೀದಿಗೆ ಎಸೆದಿದ್ದಾನೆ.

ಈ ವೇಳೆ ಅವರ ಅಪ್ರಾಪ್ತ ಪುತ್ರಿ ಘಟನೆಯ ವಿಡಿಯೋ ರೆಕಾರ್ಡ್ ಮಾಡಲು ಪ್ರಯತ್ನಿಸಿದಾಗ, ಆಕೆಗೆ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Leave a Reply

Your email address will not be published. Required fields are marked *