ಸುಳ್ಯ : ದೇವಸ್ಥಾನದ ಜಾತ್ರೋತ್ಸವದ ವೇಳೆ ಕುಣಿತ ಭಜನೆ ಮಾಡುತ್ತಿದ್ದ ಮಹಿಳೆಯೊಬ್ಬರು ಅಚಾನಕ್ ಕುಸಿದು ಬಿದ್ದು ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದಿದೆ.
ಮೃತರನ್ನು ರತ್ನಾವತಿ ಬಾಳಪ್ಪ ಪೂಜಾರಿ ಕನ್ನಡ್ಕ (63) ಎಂದು ಗುರುತಿಸಲಾಗಿದೆ. ಅವರು ಸುಳ್ಯ ಪದವು ಮಹಾಲಕ್ಷ್ಮಿ ವನಿತಾ ಭಜನ ಮಂಡಳಿಯ ಸದಸ್ಯೆಯಾಗಿದ್ದರು.

ಮಾಹಿತಿಯ ಪ್ರಕಾರ, ರತ್ನಾವತಿ ಅವರು ಈಶ್ವರಮಂಗಲ ಕಾವು ಮುತ್ತು ಮಾರಿಯಮ್ಮ ದೇವಸ್ಥಾನದ ಜಾತ್ರೋತ್ಸವದ ಸಂದರ್ಭದಲ್ಲಿ ಕುಣಿತ ಭಜನೆ ಮಾಡುತ್ತಿದ್ದಾಗ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕುಟುಂಬ ಮಾಹಿತಿ ಪ್ರಕಾರ ರತ್ನಾವತಿ ಅವರು ಇಬ್ಬರು ಪುತ್ರರು ಹಾಗೂ ಪತಿಯನ್ನು ಈಗಾಗಲೇ ಕಳೆದುಕೊಂಡಿದ್ದು, ಒಂಟಿಯಾಗಿ ಜೀವನ ನಡೆಸುತ್ತಿದ್ದರು. ಅವರ ನಿಧನಕ್ಕೆ ಸ್ಥಳೀಯ ಭಜನ ಮಂಡಳಿ ಸದಸ್ಯರು ಹಾಗೂ ಗ್ರಾಮಸ್ಥರು ಸಂತಾಪ ವ್ಯಕ್ತಪಡಿಸಿದ್ದಾರೆ.







