Breaking
2 Mar 2026, Mon

ಮಂಗಳೂರು ವಿಮಾನ ನಿಲ್ದಾಣದಲ್ಲಿ ₹80 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿ ವಶ; ಮೂವರ ಬಂಧನ

ಮಂಗಳೂರು : ಬಜಪೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಸುಮಾರು ₹80 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿಯನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಕೇರಳ ಮೂಲದ ಒಬ್ಬ ಪುರುಷ ಹಾಗೂ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ.

ಖಚಿತ ಗುಪ್ತಚರ ಮಾಹಿತಿ ಆಧಾರದಲ್ಲಿ Directorate of Revenue Intelligence (ಡಿಆರ್ಐ) ಮಂಗಳೂರು ಪ್ರಾದೇಶಿಕ ಘಟಕದ ಅಧಿಕಾರಿಗಳು ಪ್ರಯಾಣಿಕರನ್ನು ತಡೆದು ತಪಾಸಣೆ ನಡೆಸಿದರು. ಪರಿಶೀಲನೆ ವೇಳೆ ಆರೋಪಿಗಳು ವಿದೇಶಿ ಕರೆನ್ಸಿಯನ್ನು ತಮ್ಮ ಕೈಚೀಲ ಹಾಗೂ ಚೆಕ್-ಇನ್ ಬ್ಯಾಗ್ ಗಳಲ್ಲಿ ಚಾಣಾಕ್ಷತನದಿಂದ ಅಡಗಿಸಿಟ್ಟಿರುವುದು ಪತ್ತೆಯಾಯಿತು. ವಶಪಡಿಸಿಕೊಳ್ಳಲಾದ ಕರೆನ್ಸಿಯಲ್ಲಿ ಅಮೆರಿಕನ್ ಡಾಲರ್, ಪೌಂಡ್ ಸ್ಟರ್ಲಿಂಗ್, ಸೌದಿ ರಿಯಾಲ್ ಹಾಗೂ ಯುಎಇ ದಿರಾಮ್ ಸೇರಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಂಧಿತರು ವಿರುದ್ಧ ಕಸ್ಟಮ್ಸ್ ಕಾಯ್ದೆ, 1962 ಅನ್ವಯ ಪ್ರಕರಣ ದಾಖಲಿಸಲಾಗಿದ್ದು, ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ತಿಳಿದು ಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಲದ ಇತರ ಸದಸ್ಯರು ಹಾಗೂ ಹೂಡಿಕೆದಾರರನ್ನು ಪತ್ತೆಹಚ್ಚುವ ಕಾರ್ಯ ಮುಂದುವರಿದಿದೆ ಎಂದು ಡಿಆರ್ಐ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *