Breaking
21 Jun 2026, Sun

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವಕ್ಕೆ ಚಾಲನೆ: ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ತಾಲೂಕಿನ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವವು ಏಪ್ರಿಲ್ 02 ರಿಂದ 10 ರವರೆಗೆ ಭಕ್ತಿಭಾವಪೂರ್ಣವಾಗಿ ನಡೆಯಲಿದೆ. ಇದರ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮವು ಮಾರ್ಚ್ 2 ರಂದು ಶ್ರೀ ಸದಾಶಿವ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವ ಮೂಲಕ ನೆರವೇರಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ ಪುರುಷೋತ್ತಮ ಜಿ, ಜಾತ್ರೋತ್ಸವ ಸಮಿತಿ ಅಧ್ಯಕ್ಷ ಜನಾರ್ಧನ ಗೌಡ ನಿರುಂಬುಡ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಸೇವಾಪ್ರತಿನಿಧಿ ಚಂದ್ರಕಲಾ, ಅರ್ಚಕರು, ಜಾತ್ರೋತ್ಸವ ಸಮಿತಿ, ಅಭಿವೃದ್ಧಿ ಸಮಿತಿ, ಯಕ್ಷಗಾನ ಸಮಿತಿ ಹಾಗೂ ಪ್ರಗತಿ ಬಂಧು ಒಕ್ಕೂಟದ ಪದಾಧಿಕಾರಿಗಳು, ಸರ್ವ ಸದಸ್ಯರು ಮತ್ತು ಭಕ್ತಭಿಮಾನಿಗಳು ಉಪಸ್ಥಿತರಿದ್ದರು.

ಜಾತ್ರೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *