Breaking
25 Sep 2026, Fri

ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಸಹಾಯಕ

ಮಂಗಳೂರು: ಲಂಚದ ಬೇಡಿಕೆ ಇಟ್ಟು ಹಣ ಸ್ವೀಕರಿಸುತ್ತಿದ್ದ ಮಂಗಳೂರು ಲೋಕೋಪಯೋಗಿ ಇಲಾಖೆಯ ಪ್ರಥಮ ದರ್ಜೆ ಗುತ್ತಿಗೆದಾರನ ಸಹಾಯಕನನ್ನು ಲೋಕಾಯುಕ್ತ ಪೊಲೀಸರು ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದಾರೆ.

ಬಂಧಿತನನ್ನು ಎಸ್.ಡಿ.ಎ ಸಂಪತ್ ಎಂದು ಗುರುತಿಸಲಾಗಿದೆ.

2025ರಲ್ಲಿ ಉಡುಪಿ ಜಿಲ್ಲೆಯ ಗ್ರಾಮ ಪಂಚಾಯತ್‌ಗಳಿಗೆ ಒಳಪಟ್ಟ ದಾರಿ ದೀಪ ವಿಸ್ತರಣೆಯ ಸರ್ಕಾರಿ ಕಾಮಗಾರಿಗಳನ್ನು ನಿರ್ವಹಿಸುತ್ತಿದ್ದ ಸಂಪತ್‌ ಕೆಲಸದ ಬಿಲ್‌ಗೆ 4 ಪರ್ಸೆಂಟ್‌ನಂತೆ ಒಟ್ಟು 22,600 ರೂ. ಕೊಡಬೇಕು ಎಂದು ದೂರುದಾರರಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಈ ಕುರಿತು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಫೆ. 2ರಂದು ದೂರುದಾರರಿಂದ ₹22,600 ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದಾರೆ.

Leave a Reply

Your email address will not be published. Required fields are marked *