ಬಂಟ್ವಾಳ: ಕಾರು ಡಿಕ್ಕಿಯಾಗಿ ಗಂಭೀರ ಗಾಯಗೊಂಡ ವ್ಯಕ್ತಿಯೋರ್ವ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಅಡ್ಯಾರು ನಿವಾಸಿ 65 ವರ್ಷದ ಜಯರಾಮ ಎಂದು ಗುರುತಿಸಲಾಗಿದೆ.

ಬಂಟ್ವಾಳ ತಾಲೂಕಿನ ಬಡಗುಂಡಿ ಎಂಬಲ್ಲಿ ಧರ್ಮಸ್ಥಳ ಕಡೆಯಿಂದ ಬರುತ್ತಿದ್ದ ಕಾರೊಂದು ಓವರ್ ಟೇಕ್ ಮಾಡುವ ವೇಳೆ ಸ್ಕೂಟರ್ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಸವಾರ ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.







