Breaking
25 Apr 2026, Sat

ಓಮನ್‌ನಲ್ಲಿ ಉಳ್ಳಾಲ ಮೂಲದ ಯುವಕ ಆತ್ಮಹತ್ಯೆ

ಉಳ್ಳಾಲ : ಓಮನ್ ನಲ್ಲಿ ಉಳ್ಳಾಲ ಮೂಲದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಸೋಮೇಶ್ವರ ನಿವಾಸಿಗಳಾದ ಚಂದ್ರ ಮತ್ತು ದೀಪಾ ದಂಪತಿಯ ಪುತ್ರ ಪುನೀತ್ ಪೂಜಾರಿ (32) ಎಂದು ಗುರುತಿಸಲಾಗಿದೆ.

ಸುಮಾರು ಒಂದೂವರೆ ವರ್ಷಗಳಿಂದ ಒಮಾನ್‌ ನಲ್ಲಿ ಕೆಲಸ ಮಾಡುತ್ತಿದ್ದ ಪುನೀತ್‌ ಅವರು ಕಳೆದ ನಾಲ್ಕು ವರ್ಷಗಳಿಂದ ಉರ್ವಾದ ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದರು ಎಂದು ತಿಳಿದುಬಂದಿದೆ .

ಇತ್ತೀಚಿನ ದಿನಗಳಲ್ಲಿ ಯುವತಿ ಫೋನ್ ಕರೆಗಳನ್ನು ಸ್ವೀಕರಿಸದೇ, ಸಂದೇಶಗಳಿಗೆ ಪ್ರತಿಕ್ರಿಯೆ ನೀಡದೇ ಇದ್ದ ಹಿನ್ನೆಲೆಯಲ್ಲಿ ಪುನೀತ್ ಅವರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಈ ವಿಷಯವನ್ನು ತಮ್ಮ ಗೆಳೆಯರ ಬಳಿಯೂ ಅವರು ಹಂಚಿಕೊಂಡಿದ್ದರು. ಪ್ರೀತಿ ದೂರವಾದ ನೋವಿನ ಹಿನ್ನಲೆಯಲ್ಲಿ ಪುನೀತ್ ಸಾಮಾಜಿಕ ಜಾಲತಾಣದಲ್ಲಿ ಲೈವ್ ವಿಡಿಯೋ ನಡೆಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *