Breaking
4 Mar 2026, Wed

ನಾಪತ್ತೆಯಾದ ವ್ಯಕ್ತಿಯೋರ್ವನ ಮೃತದೇಹವು ಇಂದ್ರಾಣಿ ನದಿಯಲ್ಲಿ ಪತ್ತೆ

ಉಡುಪಿ: ನಾಪತ್ತೆಯಾದ ವ್ಯಕ್ತಿಯೋರ್ವನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕೊಡವೂರು ಸಮೀಪದ ಇಂದ್ರಾಣಿ ನದಿಯಲ್ಲಿ ನಡೆದಿದೆ.

ಮೃತಪಟ್ಟವರನ್ನು ಅಂಬಾಗಿಲು ಸುಬ್ರಹ್ಮಣ್ಯ ನಗರದ ನಿವಾಸಿ ಸುರೇಶ್ ಪೂಜಾರಿ (54) ಎಂದು ಗುರುತಿಸಲಾಗಿದೆ.

ಕಳೆದ ಕೆಲವು ದಿನಗಳಿಂದ ಸುರೇಶ್ ಪೂಜಾರಿ ಅವರು ನಾಪತ್ತೆಯಾಗಿದ್ದರು. ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಎಲ್ಲಾ ಕಡೆ ಹುಡುಕಾಟ ನಡೆಸಿದರೂ ಪತ್ತೆಯಾಗಲಿಲ್ಲ.

ಇದೀಗ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಸಮೀಪದ ಇಂದ್ರಾಣಿ ನದಿಯಲ್ಲಿ ಅವರ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

Leave a Reply

Your email address will not be published. Required fields are marked *