ಉಳ್ಳಾಲ: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಕಮೆಂಟ್ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಭಟ್ಕಳ ನಿವಾಸಿ ಶಂಕರ್ ಮಸ್ತಪ್ಪ ಮೊಗೆರ್ ಎಂದು ಗುರುತಿಸಲಾಗಿದೆ.

ಮಾ. 02 ರಂದು ಶಂಕರ್11916 ಎಂಬ ಇನ್ಸ್ಟಾಗ್ರಾಂ ಖಾತೆಯಲ್ಲಿ “ಸಪೋರ್ಟ್ ಮಾಡಿ ಬ್ರೋ ಉಳ್ಳಾಲ ಮಸ್ಟಿದ್ ಹತ್ರ ಬಾಂಬ್ ಬ್ಲಾಸ್ಟ್ ಮಾಡ್ತೀನಿ” ಎಂಬ ಪ್ರಚೋದನಕಾರಿ ಕಮೆಂಟ್ ಮಾಡಲಾಗಿದ್ದು ಈತನ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಮಾ.03 ರಂದು ಆತನನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯಿಂದ ಕೃತ್ಯಕ್ಕೆ ಬಳಸಿದ ಮೊಬೈಲನ್ನು ವಶಪಡಿಸಿಕೊಂಡಿದ್ದಾರೆ.





