Breaking
25 Sep 2026, Fri

ಚಲಿಸುತ್ತಿದ್ದ ಬಸ್ ಗೆ ಬೆಂಕಿ: ಪ್ರಯಾಣಿಕರು ಅಪಾಯದಿಂದ ಪಾರು

ಚಿಕ್ಕಮಗಳೂರು: ಚಲಿಸುತ್ತಿದ್ದ ಬಸ್‌ ಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಕಾಫಿನಾಡಿನ ಜೂನಿಯರ್ ಕಾಲೇಜು ಸಮೀಪ ಮಾ. 03 ರಂದು ನಡೆದಿದೆ.

ಚಿಕ್ಕಮಗಳೂರು ಡಿಪೋಗೆ ಸೇರಿದ ಬಸ್ ಜಿಲ್ಲಾ ಕೇಂದ್ರದಿಂದ ಹಾಸನದತ್ತ ತೆರಳುತ್ತಿದ್ದು, ಜೂನಿಯರ್ ಕಾಲೇಜು ಬಳಿ ತಲುಪುತ್ತಿದ್ದಂತೆ ಇಂಜಿನ್ ಭಾಗದಲ್ಲಿ ದಟ್ಟ ಹೊಗೆ ಹಾಗೂ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಚಾಲಕ ಬಸ್ ನಿಲ್ಲಿಸಿ, ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ.

ಘಟನೆಯಲ್ಲಿ ಬಸ್ಸಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ. ಈ ಘಟನೆಯಲ್ಲಿ ಬಸ್ಸಿನ ಮುಂಭಾಗ ಭಾಗಶಃ ಹಾನಿಗೊಳಗಾಗಿದೆ.

Leave a Reply

Your email address will not be published. Required fields are marked *