Breaking
25 Sep 2026, Fri

10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಕುಂದಾಪುರ: ಅಪರಾಧ ಕೃತ್ಯವೊಂದರಲ್ಲಿ ಭಾಗಿಯಾಗಿದ್ದು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಶಶಿಕಾಂತ್ ಶೆಟ್ಟಿ(44) ಎಂದು ಗುರುತಿಸಲಾಗಿದೆ.

ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪರಾಧ ಕೃತ್ಯವೊಂದರಲ್ಲಿ ಭಾಗಿಯಾಗಿದ್ದ ಈತನ ವಿರುದ್ದ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಪಶ್ಚಿಮ ಬಂಗಾಲ ರಾಜ್ಯದ ಮುರ್ಷಿದಾಬಾದ್ ಜಿಲ್ಲೆಯ ಬನಿನಾಥಪುರ ಎಂಬಲ್ಲಿ ಆರೋಪಿಯನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Leave a Reply

Your email address will not be published. Required fields are marked *