Breaking
7 Mar 2026, Sat

ಬಾವಿಗೆ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

ಉಡುಪಿ: ಬಾವಿಗೆ ಬಿದ್ದ ವ್ಯಕ್ತಿಯನ್ನು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ರಕ್ಷಿಸಿದ ಘಟನೆ ನಡೆದಿದೆ.

ರಕ್ಷಿಸಲ್ಪಟ್ಟ ವ್ಯಕ್ತಿಯನ್ನು ಉಡುಪಿಯ ಸಗ್ರಿ ನಿವಾಸಿ ಜಯಕರ ನಾಯಕ್ (59) ಎಂದು ಗುರುತಿಸಲಾಗಿದೆ.

ಮನೆಯ ಆವರಣದಲ್ಲಿರುವ ಬಾವಿಗೆ ಅವರು ಬಿದ್ದಿರುವುದನ್ನು ಗಮನಿಸಿದ ಮನೆಯವರು ತಕ್ಷಣವೇ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಜಯಕರರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆಯಲ್ಲಿ ಜಯಕರ ಅವರು ಅಪಾಯದಿಂದ ಪಾರಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿರಬಹುದು ಅಥವಾ ಬಾವಿಗೆ ಜಿಗಿದಿರಬಹುದು ಎಂದು ಶಂಕಿಸಲಾಗಿದೆ. ಈ ವೇಳೆ ಅವರು ಮದ್ಯಪಾನ ಮಾಡಿದ್ದರು ಎನ್ನಲಾಗಿದೆ.

Leave a Reply

Your email address will not be published. Required fields are marked *