Breaking
6 Mar 2026, Fri

ಗುಣಶ್ರೀ ವಿದ್ಯಾಲಯ ಕುಳ ಕುಂಡಡ್ಕ ಇಲ್ಲಿನ 2025 – 26 ನೇ ಸಾಲಿನ ಹತ್ತನೇ ತರಗತಿ ಮಕ್ಕಳ ಬೀಳ್ಕೊಡುಗೆ ಸಮಾರಂಭ

ವಿಟ್ಲ :ಗುಣಶ್ರೀ ವಿದ್ಯಾಲಯ ಕುಳ ಕುಂಡಡ್ಕ ಇಲ್ಲಿನ 2025 – 26 ನೇ ಸಾಲಿನ ಹತ್ತನೇ ತರಗತಿ ಮಕ್ಕಳ ಬೀಳ್ಕೊಡುಗೆ ಸಮಾರಂಭ ಮಾ. 5 ರಂದು ಜರಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕ ವೇಣುಗೋಪಾಲ ಶೆಟ್ಟಿ ಮರುವಾಳ ವಹಿಸಿದ್ದರು.

ಮುಖ್ಯ ಅಥಿತಿಯಾಗಿ ಅಳಿಕೆ ಸತ್ಯ ಸಾಯಿ ಲೋಕ ಸೇವಾ ಸಂಸ್ಥೆಯ ಯೋಗ ಶಿಕ್ಷಕ ಆನಂದ ಶೆಟ್ಟಿ ಮಕ್ಕಳಿಗೆ ಶುಭ ಹಾರೈಸಿ ಹತ್ತನೇ ತರಗತಿಯಲ್ಲಿ ಪಡೆಯುವ ಅಂಕಗಳು ಮಕ್ಕಳ ಭವಿಷ್ಯವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಆದುದರಿಂದ ಮುಂಬರುವ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಕಲಿತ ಶಾಲೆಗೂ ಊರಿಗೂ ಹೆಸರು ತನ್ನಿ ಎಂದರು.

ಈ ವೇಳೆ ಮಕ್ಕಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ಮುಖ್ಯ ಶಿಕ್ಷಕ ಪ್ರವೀಣ್ ಶೆಟ್ಟಿ ಮೈರ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *