Breaking
6 Aug 2026, Thu

ಬಜೆಟ್ ಪ್ರತಿಕ್ರಿಯೆ: ಕರಾವಳಿ ಅಭಿವೃದ್ಧಿಗೆ ಮಹತ್ವ ನೀಡಿದ ರಾಜ್ಯ ಬಜೆಟ್ : ಬಿ. ರಮಾನಾಥ ರೈ

ಬಂಟ್ವಾಳ: ಕರ್ನಾಟಕ ಸರ್ಕಾರ ಮಂಡಿಸಿದ ಬಜೆಟ್ ಜನಪರ ಹಾಗೂ ಅಭಿವೃದ್ಧಿಪರವಾಗಿದೆ. ರೈತರು, ಮಹಿಳೆಯರು, ಯುವಕರು ಹಾಗೂ ಮಧ್ಯಮ ವರ್ಗದ ಜನರಿಗೆ ನೀಡಿರುವ ಯೋಜನೆಗಳು ಸ್ವಾಗತಾರ್ಹವಾಗಿವೆ. ಜೊತೆಗೆ ಕರಾವಳಿ ಪ್ರದೇಶದ ಪ್ರವಾಸೋದ್ಯಮ, ಮೀನುಗಾರಿಕೆ, ಪೊಲೀಸ್ ಠಾಣೆಗಳ ಬಲವರ್ಧನೆ, ಕೃಷಿ, ಅರಣ್ಯ, ಆರೋಗ್ಯ, ಮುಜರಾಯಿ ಹಾಗೂ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ.

ಇದರೊಂದಿಗೆ ವಸತಿ, ಶಿಕ್ಷಣ ಸೇರಿದಂತೆ ಎಲ್ಲಾ ವರ್ಗದ ಸಮುದಾಯದ ಕಲ್ಯಾಣಕ್ಕಾಗಿ ವಿಶೇಷ ಗಮನ ಹರಿಸಿರುವುದು ಸಂತಸದ ಸಂಗತಿಯಾಗಿದೆ. ರಾಜ್ಯದ ಸಮಗ್ರ ಹಾಗೂ ಕರಾವಳಿ ಪ್ರದೇಶದ ಅಭಿವೃದ್ಧಿಗೆ ಈ ಬಜೆಟ್ ಮಹತ್ವದ ಹೆಜ್ಜೆಯಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ಬಿ. ರಮಾನಾಥ ರೈ ತಿಳಿಸಿದ್ದಾರೆ.

Leave a Reply

Your email address will not be published. Required fields are marked *