Breaking
25 Sep 2026, Fri

ಉಳ್ಳಾಲದಲ್ಲಿ ಅರಣ್ಯಾಧಿಕಾರಿ ಮನೆಗೆ ಕಳ್ಳತನ : ಚಿನ್ನಾಭರಣ ಸೇರಿ ಲಕ್ಷಾಂತರ ನಗದು ದೋಚಿದ ಕಳ್ಳರು

ಉಳ್ಳಾಲ: ಅರಣ್ಯಾಧಿಕಾರಿ ಮೆಹಬೂಬ್ ಸಾಬ್ ಗುಡಿಹೊಲ ವಾಸವಿದ್ದ ಅಂಬಿಕಾ ರೋಡ್ ನಲ್ಲಿರುವ ಬಾಡಿಗೆ ಮನೆಯಲ್ಲಿ ಕಳ್ಳರು ಕಳ್ಳತನ ನಡೆಸಿದ ಘಟನೆ ನಡೆದಿದೆ.

ಅಂಬಿಕಾ ರೋಡ್ ನ ಬಾಡಿಗೆ ಮನೆಯಲ್ಲಿ ಕಳೆದ ಆರು ತಿಂಗಳುಗಳಿಂದ ಮೆಹಬೂಬ್ ಸಾಬ್ ತನ್ನ ಪತ್ನಿ ಮತ್ತು ಪುಟ್ಟ ಮಗುವಿನೊಂದಿಗೆ ವಾಸವಿದ್ದರು. ಫೆ.27 ರಂದು ಮೆಹಬೂಬ್ ಕುಟುಂಬ ಸಮೇತ ತಮ್ಮ ಊರಾದ ಕೊಪ್ಪಳಕ್ಕೆ ತೆರಳಿದ್ದರು. ಮರುದಿನ ಬೆಳಗ್ಗೆ ಊರಿಂದ ಮರಳಿದಾಗ ಈ ಕಳವು ನಡೆದಿರುವುದು ಬೆಳಕಿಗೆ ಬಂದಿದೆ.

ಮನೆಯೊಳಗೆ ನುಗ್ಗಿದ ಕಳ್ಳರು ಹಾಲ್ ಮತ್ತು ಎರಡು ಕೋಣೆಯೊಳಗಿನ ಕಪಾಟುಗಳನ್ನು ಜಾಲಾಡಿದ್ದು ,ಲಾಕರ್ ನಲ್ಲಿದ್ದ 181 ಗ್ರಾಂ ಚಿನ್ನ, ಬೆಳ್ಳಿಯ ಆಭರಣಗಳು ಹಾಗೂ ಮೆಹಬೂಬ್ ಬ್ಯಾಂಕಿನಿಂದ ಸಾಲ ಪಡೆದಿದ್ದ ಹತ್ತೂವರೆ ಲಕ್ಷ ರೂ. ನಗದು ಹಣವನ್ನು ದೋಚಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಮುಂದುವರೆಸುತ್ತಿದ್ದಾರೆ.

Leave a Reply

Your email address will not be published. Required fields are marked *