Breaking
25 Sep 2026, Fri

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸರ ಬಲೆಗೆ

ಉಡುಪಿ: 10 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿದ್ದು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕುಂದಾಪುರ ಕುಂಭಾಶಿ ಕೊರವಾಡಿ ಹರಂತುಬೆಟ್ಟುವಿನ ನಿವಾಸಿ ವಿಘ್ನೇಶ್ವರ ಐತಾಳ್‌(56) ಎಂದು ಗುರುತಿಸಲಾಗಿದೆ.

2011 ರಿಂದ ನ್ಯಾಯಾಲಯಕ್ಕೆ ಹಾಜರಾಗದೇ 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಈತನ ವಿರುದ್ದ ಪ್ರಕರಣಗಳು ದಾಖಲಾಗಿದ್ದು 10 ಕ್ಕಿಂತಲೂ ಹೆಚ್ಚು ಬಾರಿ ವಾರೆಂಟ್ ಜಾರಿಯಾಗಿತ್ತು. ಇದೀಗ ಆರೋಪಿಯನ್ನು ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *