Breaking
21 Jun 2026, Sun

ಯಲ್ಲಾಪುರದಲ್ಲಿ ಬಸ್ ಮತ್ತು ಕಾರಿನ ನಡುವೆ ಡಿಕ್ಕಿ: ಮಂಗಳೂರು ಮೂಲದ ಯುವಕ ಸಾವು

ಕಾರವಾರ: ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಮಂಗಳೂರು ಮೂಲದ ವೆಬ್‌ ಡೆವಲಪರ್‌ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಳಲಗಾಂವ ಗ್ರಾಮದ ಬಳಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಮಂಗಳೂರು ಮೂಲದ ವೆಬ್ ಡೆವಲಪರ್ ಮುಕೇಶ್ ಕೃಷ್ಣ ಶೆಟ್ಟಿ (39) ಎಂದು ಗುರುತಿಸಲಾಗಿದೆ.

ಮಾ. 5 ರಂದು ಕುಂದಾಪುರದಿಂದ ಹುಬ್ಬಳ್ಳಿಗೆ ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *