Breaking
23 Sep 2026, Wed

ಅಕ್ರಮವಾಗಿ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಉಡುಪಿ: ಅಕ್ರಮವಾಗಿ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಶಿರ್ವ ಪೊಲೀಸರು ಪಾದೂರು ಗ್ರಾಮದ ಚಂದ್ರನಗರ ಜನತಾ ಕಾಲೋನಿ ಎಂಬಲ್ಲಿ ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಬೆಳಪು ಗ್ರಾಮದ ದರ್ಗಾ ಬಳಿಯ ನಿವಾಸಿ ಝಹೀರ್ ಅಹ್ಮದ್(66) ಮತ್ತು ಬೆಳಪು ಸ್ಟಡಿ ಸರ್ಕಲ್ ನಿವಾಸಿ ಸಯ್ಯದ್ ಶಮೀಮ್(28) ಎಂದು ಗುರುತಿಸಲಾಗಿದೆ.

ಇಬ್ಬರು ಆರೋಪಿಗಳು ಕಾರಿನಲ್ಲಿ ಅಕ್ರಮವಾಗಿ ಮಾದಕ ವಸ್ತು ಸಾಗಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಆಧಾರದ ಮೇಲೆ ಪೊಲೀಸರು ಕಾರನ್ನು ತಡೆದು ಪರಿಶೀಲನೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಿಂದ 2.83 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತು, ಮೊಬೈಲ್ ಪೋನ್ ಮತ್ತು ಕಾರನ್ನು ವಶಪಡಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *