Breaking
23 Sep 2026, Wed

ಉಪ್ಪಿನಂಗಡಿ: ಬೈಕ್‌ ಗೆ ಕಾರು ಡಿಕ್ಕಿಯಾಗಿ ಬೈಕ್‌ ಸವಾರ ಮೃತಪಟ್ಟ ಘಟನೆ ನಗರದ ಸಮೀಪದ 34 ನೇ ನೆಕ್ಕಿಲಾಡಿ ಬೊಳ್ಳಾರ್ ಎಂಬಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಪದ್ಮುಂಜ ಸಹಕಾರಿ ಸಂಘದ ಹಿರಿಯ ಗುಮಾಸ್ತ ಚಿದಾನಂದ ಗೌಡ (56) ಎಂದು ಗುರುತಿಸಲಾಗಿದೆ.

ಚಿದಾನಂದ ಗೌಡ ಅವರು ಕೆಲಸದ ನಿಮಿತ್ತ ಬೈಕ್ ನಲ್ಲಿ ಸಂಚರಿಸುತ್ತಿದ್ದಾಗ ಬೊಳ್ಳಾರ್ ಬಳಿ ಕಾರೊಂದು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಈ ಕುರಿತು ಪುತ್ತೂರು ಸಂಚಾರಿ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *