Breaking
10 Mar 2026, Tue

ಮಂಗಳೂರಿನಲ್ಲಿ ಕೆಲಸಕ್ಕೆ ತೆರಳಿದ ಯುವತಿ ನಾಪತ್ತೆ

ಮಂಗಳೂರು: ಯುವತಿಯೋರ್ವಳು ನಾಪತ್ತೆಯಾದ ಘಟನೆ ಮಾ.06 ರಂದು ಮಂಗಳೂರಿನಲ್ಲಿ ನಡೆದಿದೆ.

ನಾಪತ್ತೆಯಾದ ಯುವತಿಯನ್ನು ಸಪನಾ (18 ವ) ಎಂದು ಗುರುತಿಸಲಾಗಿದೆ.

ಕಳೆದ 2 ವರ್ಷಗಳಿಂದ ಚಮೇಲಿ ದೇವಿ ಅವರು ಮತ್ತು ಪುತ್ರಿ ಸಪನಾ ತೋಟ ಬೆಂಗ್ರಯ ಬಾಡಿಗೆ ಮನೆಯಲ್ಲಿ ವಾಸಮಾಡಿಕೊಂಡಿದ್ದರು. ಸಪನಾ ಸುಮಾರು 6-7 ತಿಂಗಳಿನಿಂದ ಮಂಗಳೂರಿನ ಬಂದರ್ ನಲ್ಲಿರುವ ಮಾರ್ಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದಳು. ಮಾ. 6ರಂದು ಬೆಳಿಗ್ಗೆ ಸುಮಾರು 9 ಗಂಟೆಗೆ ಮನೆಯಿಂದ ಕೆಲಸಕ್ಕೆ ತೆರಳಿದ ಸಪನಾ ಬಳಿಕ ಮನೆಗೆ ವಾಪಸ್ಸಾಗಿಲ್ಲ ಎಂದು ತಿಳಿದುಬಂದಿದೆ.

ಈ ಕುರಿತು ಆಕೆಯ ತಾಯಿ ಚಮೇಲಿ ದೇವಿ ಅವರು ಪಣಂಬೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸಪನಾ ಅವರು 4 ಅಡಿ 8 ಇಂಚು ಎತ್ತರ, ಸಾಧಾರಣ ಕಪ್ಪು ಮೈಬಣ್ಣ, ಬಿಳಿ ಬಣ್ಣದ ನೆಟ್ ಇರುವ ಚೂಡಿದಾರ್ ಮತ್ತು ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾಳೆ. ಹಿಂದಿ ಮತ್ತು ಭೋಜ್‌ಪುರಿ ಭಾಷೆ ಮಾತನಾಡುತ್ತಾಳೆ.

ಈ ಯುವತಿ ಪತ್ತೆಯಾದಲ್ಲಿ ಪಣಂಬೂರು ಪೊಲೀಸ್ ಠಾಣೆಗೆ ಅಥವಾ ಮಂಗಳೂರು ನಗರ ಕಂಟ್ರೋಲ್ ರೂಮ್‌ ಗೆ ಮಾಹಿತಿಯನ್ನು ನೀಡಲು ಕೋರಲಾಗಿದೆ.

Leave a Reply

Your email address will not be published. Required fields are marked *