Breaking
6 Aug 2026, Thu

ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ: ಇಬ್ಬರ ವಿರುದ್ಧ ಪ್ರಕರಣ

ಉಡುಪಿ: ಅಕ್ರಮವಾಗಿ ಅನ್ನಭಾಗ್ಯ ಯೋಜನೆಯಡಿ ವಿತರಿಸಲಾದ ಅಕ್ಕಿಯನ್ನು ಸಂಗ್ರಹಿಸುತ್ತಿದ್ದ ಘಟನೆ ಬೈಂದೂರು ತಾಲೂಕಿನ ಬಿಜೂರು ಗ್ರಾಮದ ಹರಕೇರಿಯಲ್ಲಿ ನಡೆದಿದೆ.

ಹರಕೇರಿ ಪ್ರದೇಶದಲ್ಲಿ ಅನ್ನಭಾಗ್ಯ ಯೋಜನೆಯಡಿ ವಿತರಿಸಲಾದ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಪಡೆದ ಅಧಿಕಾರಿಗಳು ಸ್ಥಳಕ್ಕೆ ದಾಳಿ ನಡೆಸಿದರು.

ದಾಳಿಯ ವೇಳೆ ಆರೋಪಿಗಳಾದ ಅಬ್ದುಲ್ ಮಜೀದ್ ಮತ್ತು ಆಯಿಷಾ ವಾಸಿಂ ಅವರು ಮೂರು ಚಕ್ರದ ಗೂಡ್ಸ್ ವಾಹನದಲ್ಲಿ ಅಕ್ಕಿಯನ್ನು ಸಂಗ್ರಹಿಸಿಟ್ಟಿರುವುದು ಪತ್ತೆಯಾಗಿದೆ.

ಒಟ್ಟು 9,200 ರೂ. ಮೌಲ್ಯದ 15 ಚೀಲಗಳಲ್ಲಿ ಇದ್ದ ಸುಮಾರು 400 ಕೆಜಿ ಅಕ್ಕಿಯನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *