Breaking
25 Apr 2026, Sat

ಬಂಟ್ವಾಳದ ದುರ್ಗಾಂಭ ಬಸ್‌ನಲ್ಲಿ ಚಿನ್ನ ಕಳವು ಮಾಡಿದ ಆರೋಪಿ ಪೊಲೀಸರ ಬಲೆಗೆ

ಬಂಟ್ವಾಳ: ತಾಲೂಕಿನ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಸಮುದ್ರ ಹೋಟೆಲ್ ಬಳಿ ನಿಲ್ಲಿಸಿದ್ದ ದುರ್ಗಾಂಭ ಬಸ್‌ನಲ್ಲಿ ಬ್ಯಾಗ್‌ನಲ್ಲಿ ಇರಿಸಿದ್ದ ಚಿನ್ನವನ್ನು ಕಳವು ಮಾಡಿದ ಆರೋಪಿಯನ್ನು ಬಂಟ್ವಾಳ ತಾಲೂಕಿನ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮಧ್ಯಪ್ರದೇಶ ನಿವಾಸಿ ಸಮದ್ ಖಾನ್ (37) ಎಂದು ಗುರುತಿಸಲಾಗಿದೆ.

ಕಳೆದ ನ. 19, 2025ರಂದು ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಸಮುದ್ರ ಹೋಟೆಲ್ ಬಳಿ ನಿಲ್ಲಿಸಿದ್ದ ದುರ್ಗಾಂಭ ಬಸ್‌ನಲ್ಲಿ ಬ್ಯಾಗ್‌ನಲ್ಲಿ ಇರಿಸಿದ್ದ ಬ್ರಹ್ಮಾವರ ಮೂಲದ ದಂಪತಿಗಳ ಸುಮಾರು 20 ಲಕ್ಷ ರೂ. ಮೌಲ್ಯದ 180 ಗ್ರಾಂ ಚಿನ್ನಾಭರಣ ಕಳವು ನಡೆದಿತ್ತು. ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬಳಿಕ ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಳುವಾದ ಚಿನ್ನಾಭರಣಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Leave a Reply

Your email address will not be published. Required fields are marked *