Breaking
23 Sep 2026, Wed

ಉಪ್ಪಿನಂಗಡಿಯಲ್ಲಿ ಆಟೋಗೆ ಕಾರು ಡಿಕ್ಕಿ: ಒಂದೇ ಕುಟುಂಬದ ಆರು ಮಂದಿ ಗಾಯ

ಪುತ್ತೂರು: ಕಾರೊಂದು ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಐವರು ಮಕ್ಕಳು ಹಾಗೂ ಆಟೋ ಚಾಲಕ ಗಾಯಗೊಂಡ ಘಟನೆ ಉಪ್ಪಿನಂಗಡಿಯಲ್ಲಿ ಮಾ. 9 ರಂದು ನಡೆದಿದೆ.

ಗಾಯಾಳುಗಳನ್ನು ಆಟೋ ಚಾಲಕ ಕಲಂದರ್ ಶಾಫಿ ಮತ್ತು ಅವರ ಮಕ್ಕಳಾದ ಮಹಮ್ಮದ್ ಜಾಝೀರ್ (13), ಮಹಮ್ಮದ್ ಇರ್ಷಾದ್ (11), ಮಹಮ್ಮದ್ ರಾಝೀಕ್ (9), ಮಹಮ್ಮದ್ ನೂರ್ (5) ಹಾಗೂ ಸಝ್ಮಾ (4) ಎಂದು ಗುರುತಿಸಲಾಗಿದೆ. ಇವರಲ್ಲಿ ಕಲಂದರ್ ಶಾಫಿ, ಸಝ್ಮಾ ಮತ್ತು ಮಹಮ್ಮದ್ ಜಾಝೀರ್ ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಲಂದರ್ ಶಾಫಿ ಅವರು ಉಪ್ಪಿನಂಗಡಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಿಂದ ಮಕ್ಕಳನ್ನು ಕರೆದುಕೊಂಡು ತಮ್ಮ ಮನೆಗೆ ತೆರಳುತ್ತಿದ್ದ ವೇಳೆ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಿಂದ ಉಪ್ಪಿನಂಗಡಿ ಕಡೆಗೆ ಅತೀವೇಗದಲ್ಲಿ ಬಂದ ಕಾರು ಸರ್ವಿಸ್ ರಸ್ತೆಗೆ ನುಗ್ಗಿ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.

ಕಾರು ಚಾಲಕನ ನಿರ್ಲಕ್ಷ್ಯ ಹಾಗೂ ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ. ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *