Breaking
11 Mar 2026, Wed

ಉಡುಪಿಯಲ್ಲಿ ಬಸ್–ಬೈಕ್ ಅಪಘಾತ: ಗಂಭೀರ ಗಾಯಗೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವು

ಉಡುಪಿ: ಬಸ್‌ ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸಿ ಗಂಭೀರ ಗಾಯಗೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಮಾ. 10 ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಹೆರ್ಗ ಶೆಟ್ಟಿಬೆಟ್ಟು ನಿವಾಸಿ ಮೊಹಮ್ಮದ್ ಝಾದ್ (19) ಎಂದು ಗುರುತಿಸಲಾಗಿದೆ.

ಸಂತೆಕಟ್ಟೆಯ ಲಕ್ಷ್ಮಿನಗರ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವಕನನ್ನು ಚಿಕಿತ್ಸೆಗೆ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಝಾದ್ ಇತ್ತೀಚೆಗೆ ತನ್ನ ಪಿಯುಸಿ ಶಿಕ್ಷಣವನ್ನು ಪೂರ್ಣಗೊಳಿಸಿ ಉದ್ಯೋಗಕ್ಕಾಗಿ ಗಲ್ಫ್ ದೇಶಕ್ಕೆ ಪ್ರಯಾಣಿಸಲು ಸಿದ್ಧತೆ ನಡೆಸುತ್ತಿದ್ದನು ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *