Breaking
20 Jun 2026, Sat

ಮನೆ ಬೀಗ ಮುರಿದು ಚಿನ್ನ-ಬೆಳ್ಳಿ ಕಳವು: ಆರೋಪಿಯ ಬಂಧನ

ಮಂಗಳೂರು: ಕಾವೂರಿನ ಉಲ್ಲಾಸ್‌ ನಗರದಲ್ಲಿರುವ ಮನೆಯಲ್ಲಿ ಚಿನ್ನ ಮತ್ತು ಬೆಳ್ಳಿ ಆಭರಣ ಕಳ್ಳತನ ಮಾಡಿದ ಆರೋಪಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.

ಮಾ. 7ರಂದು ಮಧ್ಯಾಹ್ನದ ವೇಳೆ ಕಾವೂರಿನ ಉಲ್ಲಾಸ್ ನಗರದಲ್ಲಿರುವ ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ಗಮನಿಸಿದ ದುಷ್ಕರ್ಮಿ, ಮನೆಯ ಮುಂಭಾಗದ ಬಾಗಿಲಿನ ಬೀಗವನ್ನು ಮುರಿದು ಒಳನುಗ್ಗಿ 39 ಗ್ರಾಂ ಚಿನ್ನಾಭರಣ ಹಾಗೂ 182 ಗ್ರಾಂ ಬೆಳ್ಳಿ ಆಭರಣಗಳನ್ನು ಕಳ್ಳತನ ಮಾಡಿದ್ದಾನೆ. ಕಳ್ಳತನಗೊಂಡ ಆಭರಣಗಳ ಒಟ್ಟು ಮೌಲ್ಯ ಸುಮಾರು 4,80,000 ರೂ. ಎಂದು ಅಂದಾಜಿಸಲಾಗಿದೆ. ಈ ಕುರಿತು ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬಳಿಕ ಪ್ರಕರಣದ ತನಿಖೆ ಕೈಗೊಂಡ ಕಾವೂರು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ 24 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯಿಂದ ಕಳವು ಮಾಡಿದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Leave a Reply

Your email address will not be published. Required fields are marked *